ವಿದ್ಯಾರ್ಥಿಗಳಿಗೆ ಗಾಂಜಾ ಮಾರಾಟಕ್ಕೆ ಯತ್ನ;ಓರ್ವ ಅಂದರ್!
ಶಿರಸಿ: ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಖದೀಮನೋರ್ವನನ್ನು ಶಿರಸಿ ಹೊಸ ಮಾರುಕಟ್ಟೆ ಠಾಣೆಯ ಪೊಲೀಸರು ಹೆಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತ ಯುವಕ ರಾಜೀವ ನಗರದ ನಿವಾಸಿ, ಪೇಂಟಿಂಗ್ ಕೆಲಸ ಮಾಡಿಕೊಂಡಿದ್ದ ಆನಂದ ಬೋವಿವಡ್ಡರ ಅಲಿಯಾಸ್ ತುರಿಮಣಿ (23) ಎಂದು ಗುರುತಿಸಲಾಗಿದೆ.ಮಂಗಳವಾರ ರಾತ್ರಿ 9:15ರ ಸುಮಾರಿಗೆ ಶಿರಸಿಯ ಕಾಲೇಜು ರಸ್ತೆಯ ಮಾರಿಕಾಂಬಾ ಕ್ರೀಡಾಂಗಣದ ಹತ್ತಿರ ವ್ಯಕ್ತಿಯೊಬ್ಬ ಗಾಂಜಾ ಸಾಗಾಟ ಮಾಡಿ ಮಾರಾಟ ಮಾಡುತ್ತಿರುವ ಕುರಿತು ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಹೊಸ ಮಾರುಕಟ್ಟೆ ಠಾಣೆಯ ಪೊಲೀಸರು ಆರೋಪಿಯನ್ನು ಹೆಡೆಮುರಿಕಟ್ಟಲು ಯಶಸ್ವಿಯಾಗಿದ್ದಾರೆ.

ಬಂಧಿತ ಆರೋಪಿಯಿಂದ ಸುಮಾರು 10,400 ರೂ. ಮೌಲ್ಯದ 217 ಗ್ರಾಂ ಗಾಂಜಾ ಮಾದಕ ವಸ್ತು ಹಾಗೂ ಕೃತ್ಯಕ್ಕೆ ಬಳಸಿದ್ದ ಒಂದು ಮೊಬೈಲ್ ಫೋನ್ ಅನ್ನು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ಶಿರಸಿ ಹೊಸ ಮಾರುಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿದೆ.ಶಿರಸಿ ಉಪವಿಭಾಗದ ಡಿವೈಎಸ್ಪಿ ಶ್ರೀಮತಿ ಗೀತಾ ಪಾಟೀಲ್ ಅವರ ಮಾರ್ಗದರ್ಶನದಲ್ಲಿ ಶಿರಸಿ ವೃತ್ತ ನಿರೀಕ್ಷಕರಾದ ಸಂಪತ್‌ಕುಮಾರ್ ಸಿ. ಅವರ ನೇತೃತ್ವದಲ್ಲಿ, ಹೊಸಮಾರುಕಟ್ಟೆ ಠಾಣೆಯ ಪಿಎಸ್‌ಐ ಬಸವರಾಜ್ ಕನಶೆಟ್ಟಿ ಹಾಗೂ ಅಪರಾಧ ವಿಭಾಗದ ಸಿಬ್ಬಂದಿಗಳಾದ ಸಂದೀಪ್ ನಿಂಬಾಯಿ, ರಾಕೇಶ್ ಎನ್.ಎಚ್., ಸಂತೋಷ್ ಆರ್.ಕೆ., ಅರುಣ್ ಲಮಾಣಿ ಮತ್ತು ಲಕ್ಷ್ಮಣ್ ಉಪಸ್ಥಿತರಿದ್ದರು.